ಪ್ರಮುಖ ಸುದ್ದಿ
ಮಹಾರಾಷ್ಟ್ರದಲ್ಲಿ ಮಹಾಮಳೆ : ಕೃಷ್ಣ ನದಿಪಾತ್ರದ ಗ್ರಾಮಗಳಲ್ಲಿ ಭೀತಿ!
ಯಾದಗಿರಿ : ಮಹಾರಾಷ್ಟ್ರದಲ್ಲಿ ಎಡೆಬಿಡದೆ ಮಳೆ ಸುರಿದ ಪರಿಣಾಮ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯಕ್ಕೆ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಿದೆ. ಪರಿಣಾಮ ಜಲಾಶಯದ 20 ಗೇಟ್ ಗಳಿಂದ 1ಲಕ್ಷ 90 ಸಾವಿರ ಕ್ಯೂಸೆಕ್ಸ್ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ. ಮದ್ಯರಾತ್ರಿ ವೇಳೆಗೆ 2ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕಾದ ಸ್ಥಿತಿಯಿದ್ದು ಕೃಷ್ಣಾ ನದಿಪಾತ್ರದಲ್ಲಿ ಪ್ರವಾಹದ ಭೀತಿ ಸೃಷ್ಠಿಯಾಗಿದೆ.
ಬಸವಸಾಗರ ಜಲಾಶಯದಿಂದ 2ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆಯಾದಲ್ಲಿ ಕಲಬುರಗಿ-ರಾಯಚೂರು ಮದ್ಯೆ ಸಂಪರ್ಕ ಕಲ್ಪಿಸುವ ಕೊಳ್ಳೂರು ಸೇತುವೆ ಮುಳುಗಡೆ ಆಗಲಿದೆ. ಅಲ್ಲದೆ ಕೊಳ್ಳುರು ಸೇತುವೆ ಆಸುಪಾಸಿನ ಗ್ರಾಮಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದ್ದು ಗ್ರಾಮೀಣ ಜನ ಜಾಗೃತರಾಗಿರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.