ಪ್ರಮುಖ ಸುದ್ದಿ
ಹತ್ತು ವರ್ಷಗಳ ಹಿಂದೆಯೇ 2ನೇ ರಾಜಧಾನಿ ವಿಷಯ ಪ್ರಸ್ತಾಪಿಸಿದ್ದೆ – ಸಿಎಂ
ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಕ್ಯಾಂಪ್ ಮಾಡಿ ಅಭಿವೃದ್ಧಿ ಬಗ್ಗೆ ಅಲ್ಲಿನ ಜನರ ಜೊತೆ ನೇರವಾಗಿ ಚರ್ಚಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಇನ್ನೊಂದು ರಾಜಧಾನಿ ಬಗ್ಗೆ ಹತ್ತು ವರ್ಷಗಳ ಹಿಂದೆಯೇ ನಾನು ಹೇಳಿದ್ದೆ. ಚರ್ಚಿಸಿ ಕೆಲ ತೀರ್ಮಾನಗಳನ್ನು ಕೈಗೊಳ್ಳುತ್ತೇನೆ. ಈಗ ಬಿ.ಎಸ್.ಯಡಿಯೂರಪ್ಪ ಅವರು ಪ್ರತ್ಯೇಕ ರಾಜ್ಯಕ್ಕೆ ಬೆಂಬಲವಿಲ್ಲ ಎಂದು ಹೇಳುತ್ತಲೇ ಬೆಳಗಾವಿಯಲ್ಲಿ ಸ್ವಾಮೀಜಿಗಳ ಜೊತೆ ಸಭೆ ನಡೆಸಿ ಚಿತಾವಣೆ ಮಾಡುತ್ತಿದ್ದಾರೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ಈಗಾಗಲೇ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಓಗಳ ಜೊತೆ ಸಭೆ ನಡೆಸಿದ್ದೇನೆ. ಜನರೊಂದಿಗೆ ಮಾನವೀಯತೆಯಿಂದ ವರ್ತಿಸಬೇಕು. ದೂರದೂರಿಂದ ಜನ ಬೆಂಗಳೂರಿಗೆ ಬರುವುದನ್ನು ತಪ್ಪಿಸಿ ಅಲ್ಲಿಯೇ ಅವರ ಸಮಸ್ಯೆ ಬಗೆಹರಿಸಿಕೊಡಿ ಎಂದು ಸೂಚಿಸಿದ್ದೇನೆ ಎಂದು ತಿಳಿಸಿದರು.