ಪ್ರಮುಖ ಸುದ್ದಿ
ಯಾದಗಿರಿ : ಸಾರಿಗೆ ಬಸ್ ಪಲ್ಟಿ , ಇಬ್ಬರು ಸಾವು 20 ಮಂದಿಗೆ ಗಾಯ!
ಯಾದಗಿರಿ : ಸುರಪುರ ತಾಲ್ಲೂಕಿನ ಏವೂರು ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ ಆಗಿದ್ದು ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸಾರಿಗೆ ಬಸ್ ಶಹಾಪುರ ಪಟ್ಟಣದಿಂದ ಕೆಂಭಾವಿ ಪಟ್ಟಣಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಂಭಾವಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯಿಂದಷ್ಟೇ ರಸ್ತೆ ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬುದು ತಿಳಿದು ಬರಬೇಕಿದೆ.