Homeಜನಮನಪ್ರಮುಖ ಸುದ್ದಿವಿನಯ ವಿಶೇಷ
‘KSRTC’ ಬಸ್ ನಲ್ಲಿ ಛತ್ರಿ ಹಿಡಿದು ‘ರೀಲ್ಸ್’ ಮಾಡಿದ್ದ ಚಾಲಕ, ನಿರ್ವಾಹಕಿ ಸಸ್ಪೆಂಡ್..!
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದರಲ್ಲಿ ಚಾಲಕರೊಬ್ಬರು ಛತ್ರಿ ಹಿಡಿದುಕೊಂಡು ಬಸ್ ಚಲಾಯಿಸಿದ ವಿಡಿಯೋ ಭಾರಿ ವೈರಲ್ ಆಗಿತ್ತು, ಘಟನೆ ಸಂಬಂಧ ಚಾಲಕ ಹಾಗೂ ನಿರ್ವಾಹಕಿಯನ್ನು ಅಮಾನತು ಮಾಡಲಾಗಿದೆ.
ವಿಡಿಯೋ ವೈರಲ್ ಆದ ಬಳಿಕ ಬಸ್ ನಿಂದ ಸೋರುತ್ತಿರುವ ಮಳೆ ನೀರಿನಿಂದ ರಕ್ಷಣೆ ಪಡೆಯಲು ಛತ್ರಿ ಹಿಡಿದುಕೊಂಡೇ ಚಾಲಕ ಬಸ್ ಓಡಿಸಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಅಸಲಿ ವಿಚಾರವೇ ಬೇರೆಇದೆ.
ಬಸ್ ನಲ್ಲಿ ರೀಲ್ಸ್-ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ.
ಹೌದು, ಬಸ್ ನಲ್ಲಿ ಚಾಲಕ ಛತ್ರಿ ಹಿಡಿದುಕೊಂಡು ರೀಲ್ಸ್ ಮಾಡಿದ್ದಾರೆ ಎನ್ನಲಾಗಿದೆ. ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್ ಚಾಲನೆ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸ್ಸಿನಲ್ಲಿ ಛತ್ರಿ ಹಿಡಿದು ರೀಲ್ಸ್ ಮಾಡಿದ ಚಾಲಕ ಮತ್ತು ನಿರ್ವಾಹಕಿ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದೆ.