ಕ್ಷೇತ್ರದಿಂದ ಕಾಲ್ಕಿತ್ತಿರುವುದೇ ರೈತಪರ ಕಾಳಜಿಯೇ.?-ಎಚ್ಡಿಕೆ
ಶೋಭಾ ಅವರ ರೈತಪರ ಕಾಳಜಿ ಕ್ಷೇತ್ರದಿಂದ ಕಾಲ್ಕಿತ್ತಿರುವಾಗಲೇ ಗೊತ್ತಾಗಿದೆ ಎಂದ ಎಚ್ಡಿಕೆ
ವಿವಿ ಡೆಸ್ಕ್ಃ ಮಾಜಿ ಸಿಎಂ ಎಚ್ಡಿಕೆ ಅವರು ಆಲೂಗಡ್ಡೆ ಬೆಳೆದು ಶ್ರೀಮಂತರಾಗಿದ್ದಾರೆ ಎಂದು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಅವರ ಚಿಕ್ಕ ಮಂಗಳೂರ ಕ್ಷೇತ್ರದಾದ್ಯಂತ ಪ್ರವಾಹ ಬಂದು ಸಾವಿರಾರು ಕುಟುಂಬಗಳ ಬದುಕು ಡೋಲಾಯಮಾನವಾಗಿದೆ.
ಆದರೆ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರದಲ್ಲಿದ್ದು ಸಂತ್ರಸ್ತರಿಗೆ ಸ್ಪಂಧಿಸುವ ಕೆಲಸ ಮಾಡುವದು ಬಿಟ್ಟು ಕ್ಷೇತ್ರದಿಂದ ಕಾಲ್ಕಿತ್ತಿರುವುದೇ ಅವರ ರೈತಪರ ಕಾಳಜಿಯನ್ನು ಎತ್ತಿ ತೋರಿಸುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಶೋಭಾ ಅವರ ವಿರುದ್ಧ ಟ್ವಿಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಹ ಉಂಟಾದ ಹಿನ್ನೆಲೆ ಸಾವಿರಾರು ಕುಟುಂಬಗಳು ಬೀದಿಗೆ ಬಂದಿವೆ. ಅವರ ಬದುಕು ಡೋಲಾಯಮಾನವಾಗಿದೆ. ನೆರೆ ಪರಿಹಾರ ಸಿಗುತ್ತಿಲ್ಲ ಎಂದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಅವರೊಂದಿಗಿದ್ದು ಧೈರ್ಯ ತುಂಬುವ ಕೆಲಸ ಮಾಡುವ ಬದಲು ಕ್ಷೇತ್ರದಿಂದ ಕಾಲ್ಕಿತ್ತಿರುವುದು ಅವರ ‘ರೈತಪರ ಕಾಳಜಿ’ಯನ್ನು ತೋರಿಸುತ್ತದೆ! ಎಂದು ಟ್ವಿಟಿಸಿದ್ದಾರೆ.