Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ರಾಜ್ಯ ಸರ್ಕಾರ
ಕುಂದಾಪುರ:- ಹಿಜಬ್ ವಿವಾದ ಎಫೆಕ್ಟ್ ಹಿನ್ನೆಲೆ, ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ತಡೆಹಿಡಿದಿದೆ.
ಶಿಕ್ಷಕರ ದಿನಾಚರಣೆ ಹಿನ್ನೆಲೆ ವಿವಿಧ ಶಿಕ್ಷಕರಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೇ ಹಿನ್ನೆಲೆಯಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು.
ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ನೀಡುವ ಕುರಿತು ಸರ್ಕಾರ ತಡೆ ಹಿಡಿದಿದೆ. ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿರುವಾಗ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಇದಕ್ಕೆ ತಡೆ ನೀಡಿದೆ.