ಕಾವ್ಯಪ್ರಮುಖ ಸುದ್ದಿ

ವಿಶ್ವಮಾನವರಾಗಿ ಮನ, ಮನೆ ಬೆಳಗಿದ ಕುವೆಂಪು-ಡಾ.ರಾಗಪ್ರಿಯಾ

ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನಾಚರಣೆ

ಯಾದಗಿರಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿ ಮನುಕುಲದಲ್ಲಿ ಅಜರಾಮರಾಗಿ ಉಳಿದ ವಿಶ್ವಮಾನವನಾಗಿ ಎಲ್ಲರ ಮನೆ ಮನದಲ್ಲಿ ಉಳಿದುಕೊಂಡಿರುವ ಮಹಾನ್ ಚೇತನ ರಾಷ್ಟ್ರಕವಿ ಕುವೆಂಪು ಅವರನ್ನು ನೆನೆಯುವುದೇ ನಮ್ಮೆಲ್ಲರ ಭಾಗ್ಯ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಅಭಿಪ್ರಾಯಪಟ್ಟರು.

ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ನಡೆದ ಕುವೆಂಪು ಅವರ ಜನ್ಮದಿನಾಚರಣೆ ಪ್ರಯುಕ್ತ ವಿಶ್ವ ಮಾನವ ದಿನಾಚರಣೆಯನ್ನು ಸರಳವಾಗಿ ಆಚರಿಸಿ ಕುವೆಂಪು ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಜ್ಞಾನ ಪೀಠ ಪ್ರಶಸ್ತಿ ಪಡೆದ ಮೊದಲ ಕನ್ನಡದ ಕವಿ ಕುವೆಂಪು ಅವರು ಭಾರತದ ನೈಸರ್ಗಿಕ ಕವಿಯಾಗಿದ್ದಾರೆ. ಕನ್ನಡದ ಕಂಪನ್ನು ವಿಶ್ವದಾದ್ಯಂತ ಹರಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅವರಲ್ಲಿ ಸಾಮಾಜಿಕ ಹಾಗೂ ವೈಜ್ಞಾನಿಕ ಮನೋಭಾವನೆ ವಿಚಾರಗಳು ಅಗಾಧವಾಗಿ ಬೇರೂರಿದ್ದವು. ಅವರು ತಮ್ಮ ಬರಹಗಳಿಂದ ಸಾಹಿತ್ಯ ವಲಯದಲ್ಲಿ ಗಮನ ಸೆಳೆದವರು. ಅವರ ಸ್ಮರಣೆ ಇಂದು ಅಗತ್ಯ ಎಂದು ಜಿಲ್ಲಾಧಿಕಾರಿ ನುಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಹಾಗೂ ಕಛೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button