Homeಪ್ರಮುಖ ಸುದ್ದಿ
ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ..!
ಬೆಂಗಳೂರು : ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು 21 ವರ್ಷ ವಯಸ್ಸಿನ ಪ್ರಭುದ್ಧ ಎಂದು ಗುರುತಿಸಲಾಗಿದೆ. ಪ್ರಭುದ್ಧ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ನಡೆದ ವೇಳೆ ಮನೆಯಲ್ಲಿ ಯಾರು ಇರಲಿಲ್ಲ. ತಾಯಿ ಹೊರಗೆ ಕೆಲಸಕ್ಕೆ ಹೋಗಿದ್ರು. ಮೃತಳ ತಮ್ಮ ಮನೆಗೆ ಬಂದು ನೋಡಿದಾಗ ಸಹೋದರಿ ಪ್ರಭುದ್ಧ ಸಾವನ್ನಪ್ಪಿರೋದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸರಿಂದ ಅನುಮಾನಾಸ್ಪದ ಸಾವು ಕೇಸ್ ದಾಖಲಾಗಿದೆ.
ಸದ್ಯ ಪೊಲೀಸರು ಮೃತ ಯುವತಿಯ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ವಿದ್ಯಾಭ್ಯಾಸದ ವಿಚಾರಕ್ಕೆ ಸಾವನ್ನಪ್ಪಿದ್ದಾಳಾ ಅಥವಾ ಬೇರೆ ಕಾರಣ ಇದೆಯಾ? ಅನ್ನೋ ಆಯಾಮದಲ್ಲಿ ತನಿಖೆ ನಡೆಯುತ್ತಿದೆ.