ಪ್ರಮುಖ ಸುದ್ದಿ
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಗುಣಮುಖ
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಗುಣಮುಖ
ಮುಂಬೈಃ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಸದ್ಯ ಯಾವುದೆ ಅಪಾಯವಿಲ್ಲ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪ್ ತಿಳಿಸಿದ್ದಾರೆ.
ಸುಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಜ.8 ರಂದು ಜ್ವರದಿಂದ ಬಳಲುತ್ತಿರುವ ಕಾರಣ ಆಸ್ಪತ್ರೆಗೆ ದಾಖಲಾಗಿ ಪರೀಕ್ಷಿಸಲಾಗಿ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅಂದು ಅವರನ್ನು ನಗರದ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸದ್ಯ ಕೊರೊನಾ ಮತ್ತು ನ್ಯೂಮೋನಿಯಾದಿಂದ ಅವರು ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.
ಸಾವಿರಾರು ಜನ ಅಭಿಮಾನಿಗಳು ಶೀಘ್ರ ಗುಣಮುಖವಾಗಲಿ ಎಂದು ಪ್ರಾರ್ಥಿಸಿದ್ದರು.