ಲಿಂಗಾಯತ ಸಮಾವೇಶದಲ್ಲಿ 25 ಲಕ್ಷ ಜನ!
ಲಿಂಗಾಯತ ಸಮಾವೇಶದಲ್ಲಿ 25 ಲಕ್ಷ ಜನ!
ಕಲಬುರಗಿ: ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದ ಆರಂಭ ಇದಾಗಿದೆ. ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ನಿರಂತರ ಹೋರಾಟ ನಡೆಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ನಗರದಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ಭಾಗವಹಿಸಿದ್ದ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ನವೆಂಬರ್ 19 ರಂದು ವಿಜಯಪುರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದೆ. ನಂತರ ಡಿಸೆಂಬರ್ 10 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಸಮಾವೇಶ ಆಯೋಜಿಸಲಾಗಿದೆ. ಆ ಬೃಹತ್ ಸಮಾವೇಶದಲ್ಲಿ 25 ಲಕ್ಷ ಜನ ಸೇರಲಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಶೇಕಡಾ 90 ರಷ್ಟು ಜನ ಬೆಂಬಲ ಸೂಚಿಸಿದ್ದಾರೆ. ಕೆಲವರು ಮಾತ್ರ ಸಮ್ಮತಿ ಸೂಚಿಸುತ್ತಿಲ್ಲ. ಅಗತ್ಯಬಿದ್ದರೆ ಬಿಗುಮಾನವಿಲ್ಲದೆ ಅಂತವರು ಇದ್ದಲ್ಲಿಗೆ ತೆರಳಿ ಮನವೊಲಿಸುತ್ತೇವೆ. ಅದಕ್ಕೆ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ್, ಬಸವರಾಜ ರಾಯರೆಡ್ಡಿ ಸೇರಿ ಅನೇಕರು ಪ್ರಯತ್ನಿಸುತ್ತಿದ್ದಾರೆ ಎಂದರು.
ನಗರದಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ಭಾರೀ ಜನಸ್ತೋಮವೇ ಸೇರಿತ್ತು. ವಿವಿಧ ಮಠಾಧೀಶರು ಸಮುದಾಯದ ಮುಖಂಡರು ವೇದಿಕೆಯಲ್ಲಿದ್ದರು.