Homeಪ್ರಮುಖ ಸುದ್ದಿ
ಜೂ. 24ರಿಂದ ಜುಲೈ 3ರವರೆಗೆ 18ನೇ ಲೋಕಸಭೆಯ ಮೊದಲ ಅಧಿವೇಶನ
ಜೂನ್ 24ರಿಂದ ಜುಲೈ 3ರವರೆಗೆ ಎಂಟು ದಿನಗಳ ಕಾಲ 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯಲಿದೆ ಎಂದು ಸಂಶದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. 72 ಮಂದಿ ಸಂಸದರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ 18 ಲೋಕಸಭೆಯ ಮೊದಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಅಧಿವೇಶನದಲ್ಲಿ ಎಲ್ಲಾ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜತೆಗೆ ಪ್ರಧಾನಿ ಮೋದಿ ಬಹುಮತ ಸಾಬೀತು ಮಾಡಲಿದ್ದಾರೆ. ಮೊದಲ ಮೂರು ದಿನ ಸಂಸದರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ, ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಮುಂದಿನ ಐದು ವರ್ಷಗಳ ಹೊಸ ಸರ್ಕಾರದ ಮಾರ್ಗಸೂಚಿಯನ್ನು ರೂಪಿಸುವ ಸಾಧ್ಯತೆ ಇದೆ. Ad