ಪ್ರಮುಖ ಸುದ್ದಿ
ಕಾಡಿಗೆ ತೆರಳಿ ಆತ್ಮಹತ್ಯೆಗೆ ಶರಣಾದ ಪ್ರೇಮಜೋಡಿ!
ಚಿತ್ರದುರ್ಗ: ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಯುವಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡಿರುವ ಯುವಕ ಮತ್ತು ಯುವತಿಯನ್ನು ಕಂಡ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಇಬ್ಬರೂ ಕೊನೆಯುಸಿರೆಳೆದ ದುರ್ಘಟನೆ ನಡೆದಿದೆ.
ಮೃತರನ್ನು ಹಿರಿಯೂರು ತಾಲೂಕಿನ ಮಾನಸಾ ಮತ್ತು ರಂಗಸ್ವಾಮಿ ಎಂದು ಗುರುತಿಸಲಾಗಿದೆ. ಆದರೆ, ಯಾವ ಕಾರಣಕ್ಕೆ ಆತ್ಮಹತ್ಯೆಗೆ ನಿರ್ಧರಿಸಿದ್ದರು ಎಂಬುದು ಈವರೆಗೆ ತಿಳಿದು ಬಂದಿಲ್ಲ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆಯಿಂದಾಗಿ ಪ್ರೇಮಜೋಡಿಯ ಸಾವಿನ ರಹಸ್ಯ ತಿಳಿದು ಬರಬೇಕಿದೆ.