Homeಜನಮನಪ್ರಮುಖ ಸುದ್ದಿ

’40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ’- ಎಂ.ಬಿ.ಪಾಟೀಲ್

ಶಿವಮೊಗ್ಗ: ಬಿಜೆಪಿಯವರ ವಿರುದ್ದ ಜನರ ಬಳಿ ಹೋಗುತ್ತೇವೆ. ಅವರ ಕಾಲದಲ್ಲಿ 25 – 30 ಹಗರಣ ನಡೆದಿವೆ ಅದನ್ನು ಜನರ ಮುಂದೆ ತಿಳಿಸುತ್ತೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿಯವರು ಮೊದಲು ಈ ಆರೋಪಕ್ಕೆ ಉತ್ತರ ಕೊಡಲಿ. ನಾವು ಸಹ ಹೋರಾಟ ಮಾಡುತ್ತೇವೆ. ನ್ಯಾಯಾಂಗ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮುಡಾ ಹಗರಣ ನಡೆದಾಗ ಬಿಜೆಪಿಯವರೇ ಅಧ್ಯಕ್ಷರಾಗಿದ್ದರು. ಅವರ ಪಕ್ಷದ ಶಾಸಕರೇ ಇದ್ದರು. ಮುರುಗೇಶ ನಿರಾಣಿ, ಕುಮಾರಸ್ವಾಮಿ ವಿರುದ್ದ ರಾಜ್ಯಪಾಲರಿಗೆ ದೂರು ನೀಡಿದ್ದರು. ಆ ಪ್ರಕರಣ ಏನಾಯ್ತು? ಕೋವಿಡ್ ವೇಳೆ ಎರಡು ಸಾವಿರ ಕೋಟಿ ಹಗರಣ ಆಗಿದೆ. ಯಡಿಯೂರಪ್ಪ, ಸುಧಾಕರ್ ಹಗರಣ ಮಾಡಿದ್ದಾರೆ ಎಂದು ಆರೋಪಿಸಿದರು.

ಮುಡಾ ಹಗರಣ ಸಂಬಂಧ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಯಾವುದೇ ಹಗರಣ ಮಾಡಿಲ್ಲ. ಬಿಜೆಪಿಯವರು ವಿನಾಃ ಕಾರಣ ಹೋರಾಟ ನಡೆಸುತ್ತಿದ್ದಾರೆ. 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ದೇವರಾಜ್ ಅರಸು ನಂತರ ಒಬಿಸಿ ಸಮುದಾಯದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಬಿಜೆಪಿಯವರಿಗೆ ಇದು ಸಹಿಸಲಾಗುತ್ತಿಲ್ಲ. ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button