Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆ

(Anganwadi) ಕಳೆದ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸಂಬಳ ಇಲ್ಲದೇ ಪರದಾಟ ನಡೆಸುತ್ತಿದ್ದರು. ಆದರೆ ಇದೀಗ ಒಂದು ತಿಂಗಳ ಗೌರವಧನವನ್ನು ನೀಡಿ ಸಿಹಿಸುದ್ದಿ ನೀಡಿದೆ.
ರಾಜ್ಯದ ಹಲವೆಡೆ ಕಳೆದ 3-4 ತಿಂಗಳಿನಿಂದ ಸಂಬಳ ಬಾರದೇ ಅಂಗನವಾಡಿ (Anganwadi) ಕಾರ್ಯಕರ್ತೆಯರು, ಸಹಾಯಕಿಯರು ಪರದಾಟ ನಡೆಸಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರವು ಅಂಗನವಾಡಿ (Anganwadi) ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಒಂದು ತಿಂಗಳ ಗೌರವಧನ ಬಿಡುಗಡೆ ಮಾಡಿದ್ದು, ಉಳಿದ 2 ತಿಂಗಳ ಗೌರವಧನವನ್ನು ಶೀಘ್ರವೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ.