ಪ್ರಮುಖ ಸುದ್ದಿ
ಮಾಸ್ಕ್ ಧರಿಸದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲು.! ಎಚ್ಚರಿಕೆ
ಮಾಸ್ಕ್ ಧರಿಸದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲು.!
ಬೆಂಗಳೂರಃ ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಪದೇ ಪದೆ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಎಚ್ಚರಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕು ತಡೆಗೆ ಸದ್ಯಕ್ಕೆ ಇರುವ ಪರಿಣಾಮಕಾರಿ ಔಷಧಿ ಎಂದರೆ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೈಗಳನ್ನು ಪದೇ ಪದೆ ತೊಳೆಯುವುದು ಅನಿವಾರ್ಯ. ಹೀಗಾಗಿ ಬಾಯಿ ಮತ್ತು ಮೂಗು ಸಂಪೂರ್ಣವಾಗಿ ಮುಚ್ಚುವ ರೀತಿಯಲ್ಲಿ ಮಾಸ್ಕ್ ಧರಿಸಬೇಕು.
ಈ ಎಷ್ಟೇ ಹೇಳಿದರೂ ಸಾರ್ವಜನಿಕರು ನಿಯಮ ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.