ಪ್ರಮುಖ ಸುದ್ದಿ
ಮಹಾಮಸ್ತಕಾಭಿಷೇಕ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ ಚಾಲನೆ
ಹಾಸನ: ಶ್ರವಣಬೆಳಗೊಳದ ಗೊಮ್ಮಟೇಶ್ವರ ಮೂರ್ತಿಗೆ 2018ರ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 07ರ ಬೆಳಗ್ಗೆ 10:30ರ ಸುಮಾರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಹಾಮಸ್ತಕಾಭಿಷೇಕಕ್ಕೆ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರೂ ಸೇರಿದಂತೆ ಅನೇಕ ಗಣ್ಯರು ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಹೇಳಿದ್ದಾರೆ.
ಮಹಾಮಸ್ತಕಾಭಿಷೇಕಕ್ಕೆ ಈಗಾಗಲೇ ಸಕಲ ಸಿದ್ಧತೆಗಳನ್ನು ಪೂರೈಸಲಾಗಿದೆ. ಭಕ್ತರ ಆಗಮನಕ್ಕಾಗಿ 400 ಬಸ್, 23 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ದಿನಕ್ಕೆ 35ಲಕ್ಷ ಲೀಟರ್ ನೀರು ಪೂರೈಸಲಾಗುತ್ತಿದೆ. ತುರ್ತು ಚಿಕಿತ್ಸೆಗಾಗಿ 400 ವೈದ್ಯರನ್ನು ನೇಮಿಸಲಾಗಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಸಚಿವ ಎ.ಮಂಜು ತಿಳಿಸಿದ್ದಾರೆ.