ಪ್ರಮುಖ ಸುದ್ದಿ
ಮಹಾದಿಂದ ಬರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯ-KSRTC
ಮಹಾದಿಂದ ಬರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯ-KSRTC
ಬೆಂಗಳೂರಃ ಮಹಾರಾಷ್ಟ್ರ ದಿಂದ ಕರ್ನಾಟಕಕ್ಕೆ ಬರುವ ಪ್ರತಿಯೊಬ್ಬ ಪ್ರಯಾಣಿಕನಿಗೆ ಕೊರೊನಾ ಟೆಸ್ಟ್ ಕಡ್ಡಾಯ. ಟೆಸ್ಟ್ ರಿಪೋರ್ಟ್ ನೆಗೆಟಿವ್ ಇದ್ರೆ ಮಾತ್ರ ಕರುನಾಡು ಪ್ರವೇಶಕ್ಕೆ ಅವಕಾಶ ಎಂದು ಕೆಎಸ್ ಆರ್ಟಿಸಿ ಅಧಿಕಾರಿಗಳು ಸಿಬ್ಬಂದಿಗೆ ಸೂಚಿಸಿದ್ದಾರೆ.
ಮಹಾರಾಷ್ಟ್ರ ದಿಂದ ಬಸ್ ನಲ್ಲಿ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ 24 ಗಂಟೆಯೊಳಗೆ ಕೊರೊನಾ ಟೆಸ್ಟ್ ಮಾಡಿಸಿದ ರಿಪೋರ್ಟ್ ತರಲೇಬೇಕು. ಸಮರ್ಪಕವಾಗಿ ಪರಿಶೀಲಿಸಿ ಪ್ರಯಾಣಿಕರನ್ನು ಬಸ್ಗೆ ಹತ್ತಿಸಿಕೊಳ್ಳಿ ಎಂದು ಕರ್ನಾಟಕದ ಅಧಿಕಾರಿಗಳು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕೊರೊನಾ ಹೊಸ ರೂಪಾಂತರ ಡೆಲ್ಟಾ+ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯವಿದ್ದು, ಸರ್ವರೂ ಜಾಗೃತವಹಿಸಬೇಕಾಗಿದೆ ಎಂದು ಅಧಿಕಾರಿಗಳು ಎಚ್ಷರಿಸಿದ್ದಾರೆ.