Homeಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

KSRTCಯಿಂದ ಉದ್ಯೋಗಾವಕಾಶ; 13,000 ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗುಡ್‌ನ್ಯೂಸ್‌ ಇಲ್ಲಿದೆ. ಕೆಎಸ್‌ಆರ್‌ಟಿಸಿ (Karnataka State Road Transport Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬರೋಬ್ಬರಿ 13,000 ಚಾಲಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು (KSRTC Recruitment 2024). ಈ ಕುರಿತಾದ ವಿವರ ಇಲ್ಲಿದೆ.

ಎಲ್ಲೆಲ್ಲಿ?

ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ಈ ಹುದ್ದೆಗಳಿವೆ. ಆಯಾ ಬಸ್‌ ಡಿಪೋಗಳು ಹೊರ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಿವೆ.

ವಿದ್ಯಾರ್ಹತೆ ಮತ್ತು ಮಾಸಿಕ ವೇತನ

7ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಜತೆಗೆ ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು. ಅಲ್ಲದೆ ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್‌ ಹೊಂದಿರುವುದು ಕಡ್ಡಾಯ. ಆಯ್ಕೆಯಾದವರಿಗೆ 23,000 ರೂ. ಮಾಸಿಕ ವೇತನ ನೀಡಲಾಗುತ್ತದೆ. ಜತೆಗೆ ಇಎಸ್‌ಐ, ಇಪಿಎಫ್‌ ಸೌಲಭ್ಯ ಇರಲಿದೆ.

ಇದನ್ನು ಗಮನಿಸಿ

ಹೊರಗುತ್ತಿಗೆ ನೇಮಕಾತಿ ಇದಾಗಿರುವುದರಿಂದ ಹುದ್ದೆಗಳ ಮೇಲೆ ಅಭ್ಯರ್ಥಿಗಳಿಗೆ ಯಾವುದೇ ರೀತಿ ಹಕ್ಕು ಇರುವುದಿಲ್ಲ. ಖಾಯಂ ನೇಮಕಾತಿ ವೇಳೆ ಇವರನ್ನು ತೆರವು ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳಿಗೆ ಚಾಲನೆ ತರಬೇತಿಯನ್ನು ನೀಡಿ ಪರೀಕ್ಷೆಯನ್ನು ನಡೆಸಿ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆಯ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿಯ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ವಿವರಗಳಿಗೆ: ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846ಕ್ಕೆ ಕರೆ ಮಾಡಿ.

Related Articles

Leave a Reply

Your email address will not be published. Required fields are marked *

Back to top button