ವಿವಿ ಡೆಸ್ಕ್ಃ ನೈರುತ್ಯ ಮಾನ್ಸೂನ್ ಸಾಮಾನ್ಯ ಆರಂಭದ ದಿನಾಂಕಕ್ಕಿಂತ ಮೂರು ದಿನಗಳ ಮುಂಚಿತವಾಗಿಯೇ ಇಂದು ಕೇರಳದಲ್ಲಿ ಆರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆ ಮುಂದಿನ 24 ಗಂಟೆಗಳಲ್ಲಿ ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ಹಿಮಾಲಯ, ಬಿಹಾರ, ಮತ್ತು ಪಶ್ಚಿಮ ಬಂಗಾಳದಲ್ಲಿ ಮಳೆಯಾಗಲಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಳೆ ಇರಲಿದೆ ಎಂದು ತಿಳಿಸಿದ್ದಾರೆ