ಪ್ರಮುಖ ಸುದ್ದಿ
ಐಎಮ್ಎ ದೋಖಾ : ಮನ್ಸೂರ್ ಖಾನ್ ಬಂಧನ
ಬೆಂಗಳೂರು : ಬಹುಕೋಟಿ ವಂಚನೆ ಪ್ರಕರಣದ ಆರೋಪಿ, ಐಎಮ್ಎ ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಕೊನೆಗೂ ಬಂಧನವಾಗಿದ್ದಾನೆ. ನವ ದೆಹಲಿಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ದುಬೈನಲ್ಲಿ ತಲೆಮರೆಸಿಕೊಂಡಿದ್ದ ಮನ್ಸೂರ್ ಖಾನ್ ನಿನ್ನೆ ಭಾರತಕ್ಕೆ ಆಗಮಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದೆಹಲಿಗೆ ತೆರಳಿದ್ದ ಎಸ್ ಐಟಿ ಅಧಿಕಾರಿಗಳು ಗುರುವಾರ ತಡರಾತ್ರಿ 1.50ರ ಸುಮಾರಿಗೆ ದೆಹಲಿಯಲ್ಲಿ ಮನ್ಸೂರ್ ಖಾನ್ ನನ್ನು ವಶಕ್ಕೆ ಪಡೆದಿದ್ದಾರೆ. ಐಎಮ್ಎ ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ 40 ಸಾವಿರಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.