ಪ್ರಮುಖ ಸುದ್ದಿ
ಆಂದ್ರದಲ್ಲೂ ಗ್ಯಾಂಗ್ ರೇಪ್ಃ ಹತ್ಯೆ ಶಂಕೆ, ಪೊಲೀಸರ ಸಮ್ಮುಖ ಓರ್ವನಿಗೆ ಥಳಿತ
ಆಂಧ್ರಪ್ರದೇಶಃ ತೆಲಂಗಾಣದ ಹೈದ್ರಾಬಾದ್, ಕರ್ನಾಟಕದ ಕಲಬುರ್ಗಿ ಜಿಲ್ಲೆ ಇದೀಗ ಆಂದ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ನಾಲ್ವರು ಸೇರಿ ಯುವತಿಯೋರ್ವಳನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದ ನಾಲ್ವರು ಆರೋಪಿಗಳಲ್ಲಿ ಮೂವರು ಪರಾರಿಯಾಗಿದ್ದಾರೆ.
ಓರ್ವ ಆರೋಪಿ ಪೊಲೀಸರ ವಶಕ್ಕೆ ಪಡೆಯಲಾಗಿದ್ದು, ಸಾರ್ವಜನಿಕರು ಪೊಲೀಸರ ಸಮ್ಮುಖದಲ್ಲಿಯೇ ಆರೋಪಿಗೆ ಸರಿಯಾಗಿ ಗೂಸಾ ನೀಡಿದ ಘಟನೆ ನಡೆದಿದೆ.
ಪೊಲೀಸರು ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಇನ್ನುಳಿದ ಮೂವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.