ಮಾಸ್ಕ್ ಡೇ ದಿನಾಚರಣೆ, ಕಾರ್ಮಿಕರಿಗೆ ಮಾಸ್ಕ್ ವಿತರಿಸಿದ ದರ್ಶನಾಪುರ
ಮಾಸ್ಕ್ ಡೇ ದಿನ ಮಾಸ್ಕ್ ವಿತರಿಸಿ ಶಾಸಕ ದರ್ಶನಾಪುರ ಚಾಲನೆ
ಶಹಾಪುರಃ ಕೊರೊನಾ ತಡೆಗೆ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ನಾಗರಿಕರು ಕೊರೊನಾ ನಿಯಂತ್ರಣಕ್ಕೆ ಜಾರಿಗೊಳಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು. ನಗರ ಸಭೆ ಆವರಣದಲ್ಲಿ ಮಾಸ್ಕ್ ಡೇ ದಿನಾಚರಣೆಗೆ ಚಾಲನೆ ನೀಡಿ ಕಾರ್ಮಿಕ ಮತ್ತು ನಾಗರಿಕರಿಗೆ ಮಾಸ್ಕ್ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಅಲ್ಲದೆ ಪರಸ್ಪರರು ಅಂತರ ಕಾಯ್ದುಕೊಳ್ಳಬೇಕು. ಆಗಾಗ ಕೈತೊಳೆದುಕೊಳ್ಳಬೇಕು. ಇಲ್ಲ ಸ್ಯಾನಿಟೈಸರ್ ಬಳಸಬೇಕು. ಸರ್ಕಾರ ಸೂಚಿಸಿದ ಎಲ್ಲಾ ಮಾರ್ಗೋಪಾಯಗಳನ್ನು ಅನುಸರಿಸುವ ಮೂಲಕ ಕೊರೊನಾ ನಿಯಂತ್ರಣ ಸಾಧ್ಯವಿದೆ ಎಂದರು.
ಮಾಸ್ಕ್ ಡೇ ಆಚರಿಸುವ ಹಿನ್ನೆಲೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದ್ದು, ಪ್ರತಿಯೊಬ್ಬರು ಜನರಲ್ಲಿ ಗ್ರಾಮೀಣ ಭಾಗದಲ್ಲಿ ಕೊರೊನಾ ನಿಯಂತ್ರಣಕ್ಕೆ ಪೂರಕ ಸಂಗತಿಗಳನ್ನು ಅನುಸರಿಸಲು ಅರಿವು ಮೂಡಿಸಬೇಕು. ಕೊರೊನಾ ಬಗ್ಗೆ ಅಸಡ್ಡೆ ಆತಂಕ ಬೇಡ. ಕೆಲವು ಮಾರ್ಗೋಪಾಯಗಳನ್ನು ಅನುಸರಿಬೇಕೆಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ ಜಗನ್ನಾಥರಡ್ಡಿ, ನಗರಸಭೆ ಪೌರಾಯುಕ್ತ ಬಸವರಾಜ ಶಿವಪೂಜೆ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.