ಪ್ರಮುಖ ಸುದ್ದಿ
ಯಾದಗಿರಿಃ ಪೊಲೀಸರ ದಾಳಿ, ಮಟಕಾ ದಂಧೆಕೋರನ ಬಂಧನ
ಕಿರಾಣಿ ಅಂಗಡಿಯಲ್ಲಿ ಮಟಕಾ, ಓರ್ವನ ಬಂಧನ
ಯಾದಗಿರಿಃ ಕಿರಾಣಿ ಅಂಗಡಿಯೊಂದರಲ್ಲಿ ಮಟಕಾ ದಂಧೆ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಪೊಲೀಸರು ಗುರುವಾರ ರಾತ್ರಿ ಬಂಧಿಸಿದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಂಗಡಿ ಮೇಲೆ ದಾಳಿ ನಡೆಸಿ ಮಟಕಾ ಬರೆದುಕೊಳ್ಳುತ್ತಿದ್ದ ಈಶಪ್ಪ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 3.500 ರೂ.ನಗದು ಹಾಗೂ ಒಂದು ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ವಡಿಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಠಾಣೆ ಪಿಎಸ್‍ಐ ಯವರು ತಿಳಿಸಿದ್ದಾರೆ.