ಪ್ರಮುಖ ಸುದ್ದಿ
ವಿದ್ಯಾರ್ಥಿಗಳು ಅಸ್ವಸ್ಥ : ಜಿಲ್ಲಾಸ್ಪತ್ರೆಗೆ ನೂತನ ಸಚಿವ ಮಾಧುಸ್ವಾಮಿ ಭೇಟಿ!
ತುಮಕೂರು : ತಾಲೂಕಿನ ಕಣಕುಪ್ಪೆ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಮದ್ಯಾನದ ಬಿಸಿಯೂಟ ಸೇವನೆ ಬಳಿಕ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ನೂತನ ಸಚಿವ ಜೆ.ಸಿ.ಮಾಧುಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ರಾತ್ರಿ 11:40 ರ ಸುಮಾರಿಗೆ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.
ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂಥ ಘ ಘಟನೆಗಳು ಪುನರ್ಘಟಿಸದಂತೆ ಮುನ್ನೆಚ್ಚರಿಕೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಗೆ ಸೂಚಿಸಿದ್ದಾರೆ. ತುಮಕೂರು ಸಂಸದ ಜಿ.ಎಸ್. ಬಸವರಾಜು, ಶಾಸಕ ಜ್ಯೋತಿ ಗಣೇಶ ನೂತನ ಸಚಿವರಿಗೆ ಸಾಥ್ ನೀಡಿದ್ದರು