ಪ್ರಮುಖ ಸುದ್ದಿ
‘ಅವರದು ಏರಿದ ಏಣಿಯನ್ನು ಒದೆಯುವ ಜಾತಿ’! – ಸಚಿವ ರಮೇಶ ಜಾರಕಿಹೊಳಿ
ಬೆಳಗಾವಿ: ಬಿಜೆಪಿ ಸಂಸದ ಸುರೇಶ ಅಂಗಡಿ ಪರ ಬ್ಯಾಟ್ ಬೀಸಿದ ಸಹಕಾರಿ ಸಚಿವ ರಮೇಶ ಜಾರಕಿಹೊಳಿ ಬಿಜೆಪಿಯವರದ್ದು ಏರಿದ ಏಣಿಯನ್ನು ಒದೆಯುವ ಜಾತಿ ಅಂದಿದ್ದಾರೆ. ಬೆಳಗಾವಿಯ ಬಿಜೆಪಿ ಸಂಸದ ಸುರೇಶ ಅಂಗಡಿ ಅವರಿಗೆ ಕೇಂದ್ರ ಸಚಿವ ಸ್ಥಾನ ಕೊಡಬೇಕಿತ್ತು. ಅವರಿಗೆ ಸ್ಥಾನ ಸಿಕ್ಕಿದ್ದರೆ ಗಡಿ ಜಿಲ್ಲೆ ಬೆಳಗಾವಿ ಮತ್ತಷ್ಟು ಅಭಿವೃದ್ಧಿ ಆಗುವ ನಿರೀಕ್ಷೆ ಇತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಲಿಂಗಾಯತ ಸಮುದಾಯವನ್ನು ಓಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಾರೆ. ಚುನಾವಣೆ ಮುಗಿದ ನಂತರ ನಿರ್ಲಕ್ಷ ವಹಿಸುತ್ತಾರೆ ಎಂದು ಆರೋಪಿಸಿದರು.