ಪ್ರಮುಖ ಸುದ್ದಿ
ಅಚ್ಚರಿಯ ಆಯ್ಕೆ : ಮಾಜಿ ಶಾಸಕ ಲಕ್ಷ್ಮಣ ಸವದಿಗೆ ಒಲಿದ ಮಂತ್ರಿ ಭಾಗ್ಯ!!!
ಬೆಂಗಳೂರು : ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಮಾಜಿ ಶಾಸಕ ಲಕ್ಷ್ಮಣ ಸವದಿಗೆ ಮಂತ್ರಿ ಭಾಗ್ಯ ಒಲಿದಿದೆ. ಮಾಜಿ ಸಚಿವರೂ ಆಗಿರುವ ಲಕ್ಷ್ಮಣ ಸವದಿ ಸದ್ಯ ಅಥಣಿ ಕ್ಷೇತ್ರದಲ್ಲಿ ಮಹೇಶ ಕುಮಟಹಳ್ಳಿ ಎದುರು ಪರಾಭವಗೊಂಡಿದ್ದಾರೆ. ಅಥಣಿ ಕಾಂಗ್ರೆಸ್ ಶಾಸಕರಾಗಿದ್ದ ಮಹೇಶ ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಅನರ್ಹಗೊಂಡಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಣ್ ಸವದಿಗೆ ಮಂತ್ರಿಗಿರಿ ನೀಡಿದ್ದು ಭಾರೀ ಕುತೂಹಲ ಕೆರಳಿಸಿದೆ.
ಅಥಣಿ ಕ್ಷೇತ್ರದಲ್ಲಿ ಉಪಚುನಾವಣೆ ಎದುರಾದ ಸಂದರ್ಭದಲ್ಲಿ ಲಕ್ಷ್ಮಣ ಸವದಿ ಬಿಜೆಪಿ ಅಬ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ. ಅನರ್ಹಗೊಂಡಿರುವ ಮಹೇಶ ಈಗ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.