PUC-ITI ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್

ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ಹಾಗೂ ಐಟಿಐ ಇನ್ನಿತರ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಸೀತಾರಾಮ್ ಜಿಂದಾಲ್ ಫೌಂಡೇಶನ್ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಸೀತಾರಾಮ್ ಜಿಂದಾಲ್ ಫೌಂಡೇಶನ್ ಸ್ಕಾಲರ್ ಶಿಪ್, 11 ನೇ ತರಗತಿಯಿಂದ ಸ್ನಾತಕೋತ್ತರ ಹಂತದವರೆಗಿನ ವಿದ್ಯಾರ್ಥಿಗಳಿಗಾಗಿ ನೀಡುವುದಾಗಿದ್ದು, ಇದು ವಿವಿಧ ಪದವಿ / ಡಿಪ್ಲೊಮಾ ಕೋರ್ಸ್ಗಳನ್ನು ಅಧ್ಯಯನ ಮಾಡುವ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ.
ಪ್ರಸ್ತುತ ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ, ಐ. ಟಿ. ಐ, ಡಿಪ್ಲೊಮಾ, ಪದವಿ ಪೂರ್ವ ಅಥವಾ ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಲ್ಲಿ ದಾಖಲಾದ ವಿದ್ಯಾರ್ಥಿಗಳಿಗೆ ಅರ್ಹರಾಗಿರುತ್ತಾರೆ. ಅರ್ಜಿದಾರರು ತಮ್ಮ ಹಿಂದಿನ ಅರ್ಹತಾಪರೀಕ್ಷೆಯಲ್ಲಿ ಕನಿಷ್ಠ ಶೇಕಡಾವಾರು ಅವಶ್ಯಕತೆಗಳನ್ನು ಪೂರೈಸಿರಬೇಕು.
ಎಷ್ಟು ಸ್ಕಾಲರ್ ಶಿಪ್ ಲಭ್ಯ:
ತಿಂಗಳಿಗೆ 3,200
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇಲ್ಲ. ಅಂದರೆ ವರ್ಷ ಪೂರ್ತಿ ಅರ್ಜಿ ಸಲ್ಲಿಸಬಹುದಾಗಿದೆ.