ಪ್ರಮುಖ ಸುದ್ದಿ

ಪ್ರತ್ಯೇಕ ಜಿಲ್ಲಾಸ್ಪತ್ರೆಗೆ ಶಾಸಕ ರೇವೂರ್ ಮನವಿ

ರಾಜ್ಯ ಸರ್ಕಾರಕ್ಕೆ ವಿಧಾನಸಭೆ ಭರವಸೆಗಳ ಸಮಿತಿ ಶಿಫಾರಸ್ಸು

ಕಲಬುರ್ಗಿಃ ಜಿಲ್ಲಾಸ್ಪತ್ರೆ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಚಿಕಿತ್ಸೆ ನೀಡಲು ಕಷ್ಟವಾಗುತ್ತಿದೆ. ಹೀಗಾಗಿ ಜಿಲ್ಲೆಗೆ ಒಂದು ಪ್ರತ್ಯೇಕ ಜಿಲ್ಲಾಸ್ಪತ್ರೆಯ ಅವಶ್ಯಕತೆ ಇದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ ತಿಳಿಸಿದರು.

ಗುರುವಾರ ವೈದ್ಯಕೀಯ ಮತ್ತು ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದ ವಿಧಾನಸಭೆ ಭರವಸೆಗಳ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯರೂ ಆಗಿರುವ ಆವರು ಮಾತನಾಡುತ್ತಾ, ಜಿಲ್ಲಾಸ್ಪತ್ರೆಯ ಸಮಸ್ಯೆಗಳ ಕುರಿತು ಗಮನ ಸೆಳೆದರು.

ಜಿಲ್ಲೆಯಲ್ಲಿ ಹೆಚ್ಚಿನ ಜನಸಂಖ್ಯೆ ಇರುವುದರಿಂದ ಬಡವರು ಹಾಗೂ ರಾಷ್ಟ್ರೀಯ ಯೋಜನೆಗಳ ಫಲಾನುಭವಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ.

ಜಿಲ್ಲಾ ಆಸ್ಪತ್ರೆಯಲ್ಲಿ 400 ಜನ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ವೇತನ ಅನುದಾನವೂ ಬಂದಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371(ಜೆ) ಅನುಷ್ಠಾನ ಗೊಂಡರೂ ಹಿಂದುಳಿದ ಭಾಗವಾಗಿಯೇ ಉಳಿದಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಕೋವಿಡ್ ಸಂದರ್ಭದಲ್ಲಿ ನೀಡಲಾಗಿದ್ದ ಉಪಕರಣಗಳ ವೆಚ್ಚವನ್ನೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ನೀಡಲಾಗಿದೆ ಎಂದು ಸಹ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಕಲಬುರಗಿಯಲ್ಲಿ ಇಂದಿರಾ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೈಲ್ಡ್ ಕೇರ್ ಸ್ಥಾಪನೆ ಆಗಬೇಕು. ಇವುಗಳ ಬಗ್ಗೆ ಹೆಚ್ಚಿನ ಒತ್ತು ನೀಡಿ ಅನುಷ್ಠಾನ ಗೊಳಿಸಬೇಕೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ವಿಧಾನಸಭೆ ಭರವಸೆಗಳ ಸಮಿತಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್ ಮಾತನಾಡಿ,

ಸಲ್ಲಿಸಿದ ಎಲ್ಲಾ ಬೇಡಿಕೆಗಳಿಗೆ ಅನುಮೋದನೆ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಭರವಸೆ ನೀಡಿದರು.

ಸಮಿತಿಯ ಸದಸ್ಯರಾದ ಕೆ. ಶ್ರೀನಿವಾಸ ಮೂರ್ತಿ, ಸೋಮನಗೌಡ ಬಿ. ಪಾಟೀಲ್ (ಸಾಸನೂರು), ಹರೀಶ್ ಪೂಂಜಾ, ಸಂಜೀವ್ ಮಠಂದೂರು ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಜಿಮ್ಸ್ ನಿರ್ದೇಶಕಿ ಕವಿತಾ ಪಾಟೀಲ, ವೈದ್ಯಕೀಯ ಅಧೀಕ್ಷಕ ಶಫಿಶುದ್ದಿನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಅಧಿಕಾರಿ ಡಾ. ಎ.ಎಸ್ ರುದ್ರವಾಡಿ, ಕೆಎಎಸ್ ಮುಖ್ಯ ಆಡಳಿತಾಧಿಕಾರಿ ಪಾರ್ವತಿ ಹಾಗೂ ಇನ್ನಿತರರು ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button