ಪ್ರಮುಖ ಸುದ್ದಿ
ಚಂದ್ರಗಹಣ : ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಮೌಢ್ಯ ವಿರೋಧಿ ಆಚರಣೆ!
ಬೆಳಗಾವಿ : ಇಂದು ಖಗ್ರಾಸ್ ಚಂದ್ರಗ್ರಹಣ ಗೋಚರಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಮೌಢ್ಯ ವಿರೋಧಿ ಆಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾನವ ಬಂಧುತ್ವ ವೇದಿಕೆಯಿಂದ ಸದಾಶಿವ ನಗರದ ಸ್ಮಶಾನದಲ್ಲಿ ಇಂದು ಸಂಜೆ 5 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಮೌಢ್ಯ ವಿರೋಧಿ ಜಾಗೃತಿ ಉಪನ್ಯಾಸ, ಉಪಹಾರ ಸೇವನೆ ಮೂಲಕ ಚಂದ್ರಗ್ರಹಣದ ಬಗೆಗಿನ ಮೌಢ್ಯದ ವಿರುದ್ದ ಜಾಗೃತಿ ಮೂಡಿಸಲು ಮಾನವ ಬಂಧುತ್ವ ವೇದಿಕೆ ಕಾರ್ಯಕ್ರಮ ಆಯೋಜಿಸಿದೆ.
ಶಾಸಕ ಸತೀಶ ಜಾರಕಿಹೊಳಿ ಸೇರಿದಂತೆ ಇತರೆ ಪ್ರಗತಿಪರ ಹೋರಾಟಗಾರರು, ಸಾಹಿತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೌಢ್ಯ ವಿರೋಧಿ ಜಾಗೃತಿ ಕಾರ್ಯಕ್ರಮದ ಮೂಲಕ ಜನರಲ್ಲಿನ ಮೌಢ್ಯಾಚರಣೆ, ಅಂಧಕಾರ ದೂರಾಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.