ಪ್ರಮುಖ ಸುದ್ದಿಸಂಸ್ಕೃತಿ
ಇಂದು ಶ್ರೀಕೃಷ್ಣನ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ!
ದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳ ರಾಜ್ಯದ ತ್ರಿಶೂಲ್ ಜಿಲ್ಲೆಯ
ಗುರುವಾಯೂರ್ ನ ಶ್ರೀಕೃಷ್ಣ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಪ್ರಧಾನಿ ಆಗಮನ ಹಿನ್ನೆಲೆ ದೇಗುಲಕ್ಕೆ ಬಿಗಿ ಭದ್ರತೆ ಮಾಡಲಾಗಿದ್ದು ಮೋದಿ ಆಗಮನದ ವೇಳೆ ಭಕ್ತರ ದೇಗುಲ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.