ಗುಜರಾತ್ & ಹಿಮಾಚಲ ಪ್ರದೇಶ ಎರಡೂ ರಾಜ್ಯಗಳಲ್ಲಿ ಕಮಲ ಕಿಲಕಿಲ!
ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಎರಡೂ ರಾಜ್ಯಗಳಲ್ಲಿ ಕಮಲ ಪಕ್ಷ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಗುಜರಾತಿನಲ್ಲಿ 182 ಸ್ಥಾನಗಳ ಪೈಕಿ ಸರಳ ಬಹುಮತಕ್ಕೆ ಬೇಕಾಗಿರುವ 92 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಆದರೆ, ಕಾಂಗ್ರೆಸ್ ಪಕ್ಷದ ಅಬ್ಯರ್ಥಿಗಳು 75-85ರವರೆಗೆ ಮುನ್ನಡೆ ಸಾಧಿಸಿದ್ದು ಕಂಡು ಬಂದಿದೆ. ಆದರೆ, ಸರಳ ಬಹುಮತದ ಸಂಖ್ಯೆಯಲ್ಲಿ ಸಾಗುವುದು ಕಷ್ಟಸಾಧ್ಯ. ಇನ್ನು ಹಿಮಾಚಲ ಪ್ರದೇಶದ 68 ಸ್ಥಾನಗಳ ಪೈಕಿ ಸರಳ ಬಹುಮತಕ್ಕೆ ಬೇಕಾಗಿರುವ 35 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಪಕ್ಷದ ಅಬ್ಯರ್ಥಿಗಳು ಕೇವಲ 24 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು ಕಂಡು ಬಂದಿದೆ.
10ಗಂಟೆ ವೇಳೆಗೂ ಸಹ ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರಳ ಬಹುಮತಕ್ಕೆ ಬೇಕಾದ ಮ್ಯಾಜಿಕ್ ಸಂಖ್ಯೆಯ ಮುನ್ನಡೆಯನ್ನು ಸಾಧಿಸಿದೆ. ಬಹುತೇಕ ಮತಕ್ಷೇತ್ರಗಳಲ್ಲಿ ಬಿಜೆಪಿ ಅಬ್ಯರ್ಥಿಗಳು ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆಂದು ತಿಳಿದು ಬಂದಿದೆ. ಹೀಗಾಗಿ, ಎರಡೂ ರಾಜ್ಯಗಳಲ್ಲಿ ಕಮಲ ಗೆಲುವಿನ ನಗೆ ಬೀರಲಿದೆ. ಮೋದಿ ಹವಾದಲ್ಲಿ ಕಮಲ ಅಧಿಕಾರದ ಗದ್ದುಗೆ ಏರಲಿದೆ ಎಂಬುದು ಸ್ಪಷ್ಟವಾಗಿದೆ.