ಪ್ರಮುಖ ಸುದ್ದಿ
ನೀತಿ ಆಯೋಗದ ಸಭೆ : ಪ್ರಧಾನಿ ಮೋದಿಗೆ ರೈತರ ಸಾಲಮನ್ನಾ ಬಗ್ಗೆ ಸಿಎಂ HDK ಹೇಳಿದ್ದೇನು?
ದೆಹಲಿ : ಕರ್ನಾಟಕ ರಾಜ್ಯದ ಸುಮಾರು 85 ಲಕ್ಷ ಜನ ರೈತರು ಕೃಷಿ ಸಾಲದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿಕರ ಸಾಲ ಮನ್ನಾ ಮಾಡುವ ಮೂಲಕ ದೇಶದ ಬೆನ್ನೆಲುಬಾದ ನೇಗಿಲಯೋಗಿಯ ಕೈ ಹಿಡಿಯುವ ಉದ್ದೇಶವಿದೆ. ಹೀಗಾಗಿ, ಕೇಂದ್ರ ಸರ್ಕಾರ ಶೇ.50ರಷ್ಟು ನೆರವು ನೀಡಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ನಾಲ್ಕನೇ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದಾರೆ. ರಾಜ್ಯದ ರೈತರ ಸಮಸ್ಯೆಗಳನ್ನು ಬಿಚ್ಚಿಟ್ಟು ಕೃಷಿ ಸಾಲ ಮನ್ನಾ ಮಾಡಲು ನಮ್ಮ ಸರ್ಕಾರ ಸಿದ್ಧವಾಗಿದೆ. ಹೀಗಾಗಿ, ಕೇಂದ್ರ ಸರ್ಕಾರ ಸಹಕಾರ ನೀಡಬೇಕೆಂದು ಮನವಿ ಮಾಡಿದರು.