ಪ್ರಮುಖ ಸುದ್ದಿ
ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ನೆನೆದದ್ದು ಯಾರನ್ನು ಗೊತ್ತಾ?
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ನರೇಂದ್ರ ಮೋದಿ ಕನ್ನಡದಲ್ಲೇ ತಮ್ಮ ಭಾಷಣವನ್ನು ಆರಂಭಿಸಿದರು.
ಭಾರತ್ ಮಾತಾ ಕಿ ಜೈ. ಬೆಂಗಳೂರು, ಕರ್ನಾಟಕದ ನನ್ನ ಪ್ರೀತಿಯ ಬಂಧು ಭಗಿನಿಯರೇ ನಿಮಗೆಲ್ಲಾ ನನ್ನ ನಮಸ್ಕಾರಗಳು. ನಾಡಪ್ರಭು ಕೆಂಪೇಗೌಡ, ಮಹಾತ್ಮ ಬಸವೇಶ್ವರ, ಶರಣ ಮಾದಾರ ಚನ್ನಯ್ಯ, ವೀರರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಸೂಫಿ ಸಂತ ಶಿಶುನಾಳ ಶರೀಫ, ಸರ್ ಎಂ.ವಿಶ್ವೇಶ್ವರಯ್ಯ ಅವರಂಥ ಮಹಾಪುರಷರ ನಾಡು ಕರ್ನಾಟಕ. ನ ವಕರ್ನಾಟಕ ನಿರ್ಮಾಣದಲ್ಲಿ ಪರಿವರ್ತನೆ ಮಾಡಿ ಬಿಜೆಪಿ ಗೆಲ್ಲಿಸಿ ಎಂದು ಕನ್ನಡದಲ್ಲೇ ಹೇಳುವ ಮೂಲಕ ಗಮನಸೆಳೆದರು.