Homeಅಂಕಣಜನಮನಪ್ರಮುಖ ಸುದ್ದಿಮಹಿಳಾ ವಾಣಿ

ಭಾರತದಲ್ಲಿ ಮೊದಲ ಶಂಕಿತ ‘ಮಂಕಿಪಾಕ್ಸ್’ ವೈರಸ್ ಪ್ರಕರಣ ಪತ್ತೆ!

ನವದೆಹಲಿ: ಭಾರತದಲ್ಲಿ ಮೊದಲ ಮಂಕಿಪಾಕ್ಸ್​ ಕೇಸ್​ ಪತ್ತೆಯಾಗಿದೆ. ಇತ್ತೀಚೆಗೆ ಆಫ್ರಿಕನ್ ದೇಶದಿಂದ ಭಾರತಕ್ಕೆ ಬಂದಿದ್ದರು ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್‌ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ಭಾನುವಾರ ಶಂಕಿತ ವ್ಯಕ್ತಿಯಿಂದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಮಾದರಿ ಪರೀಕ್ಷೆ ಬಳಿಕ ಮಂಕಿಪಾಕ್ಸ್‌ ದೃಢಪಟ್ಟಿರುವುದಾಗಿ ಸಚಿವಾಲಯ ತಿಳಿಸಿದೆ.

ರೋಗಿಯಲ್ಲಿ ಪಶ್ಚಿಮ ಆಫ್ರಿಕಾದ ಕ್ಲಾಡ್-2ನ Mpox ವೈರಸ್ ಇರುವಿಕೆಯನ್ನು ಪ್ರಯೋಗಾಲಯ ಪರೀಕ್ಷೆ ದೃಢಪಡಿಸಿದೆ. ಈ ಹಿನ್ನೆಲೆ ಅವರನ್ನು ಪ್ರತ್ಯೇಕವಾಗಿ ಇಡಲಾಗಿದೆ. ಸೋಂಕಿತ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸದೆ, ರೋಗಿಯು ಸ್ಥಿರವಾಗಿದ್ದಾರೆ, ಇತರೇ ರೋಗಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿದುಬಂದಿದೆ. 2022ರ ಜುಲೈ ತಿಂಗಳಲ್ಲಿ ಕೇರಳದಲ್ಲಿ 3 ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾಗಿತ್ತು. UAE (ಯುನೈಟೆಡ್‌ ಅರಬ್‌ ಎಮಿರೇಟ್ಸ್‌)ಯಿಂದ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡ ನಂತರ ಉಲ್ಬಣಗೊಂಡಿತ್ತು. ರಾಜ್ಯಗಳಿಗೆ ಸೂಚನೆ: ಮೊದಲ ಪ್ರಕರಣದ ವರದಿಯಾದ ಬೆನ್ನಲ್ಲೇ ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿರುವ ಕೆಂದ್ರ ಆರೋಗ್ಯ ಸಚಿವಾಲಯ, ಮಂಕಿಪಾಕ್ಸ್‌ ಬಗ್ಗೆ ಜನಸಾಮಾನ್ಯರಿಗಿರುವ ಅನಗತ್ಯ ಭೀತಿಯನ್ನು ನಿವಾರಿಸುವಂತೆ ಸೂಚನೆ ನೀಡಿದೆ.

ಭಾರತದಲ್ಲಿ ಹೊಸದಾಗಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಸಚಿವಾಲಯವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಎಲ್ಲಾ ಆಸ್ಪತ್ರೆಗಳಲ್ಲಿನ ಐಸೋಲೇಷನ್‌ ಸೌಲಭ್ಯ, ತರಬೇತಿ ಪಡೆದ ವೈದ್ಯರು ಇರುವಂತೆ ಮತ್ತು ಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳು ಇರುವಂತೆ ನೋಡಿಕೊಳ್ಳಬೇಕು. ಶಂಕಿತರು ಮತ್ತು ಸೋಂಕು ದೃಢಪಟ್ಟವರ ಸಂಪರ್ಕಕ್ಕೆ ಬಂದ ಇತರರನ್ನು ಪತ್ತೆ ಮಾಡುವ ಕೆಲಸವನ್ನು ಮಾಡಬೇಕು ಎಂದು ರಾಜ್ಯಗಳಿಗೆ ಸಚಿವಾಲಯ ಸೂಚನೆ ನೀಡಿದೆ. ಕರ್ನಾಟಕದಲ್ಲೂ ಹೈ ಅಲರ್ಟ್‌: ವಿದೇಶಗಳಲ್ಲಿ ಮಂಕಿ ಪಾಕ್ಸ್‌ ಆತಂಕ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ ಈಗಾಗಲೇ ನಿಗಾ ವಹಿಸಿದೆ. ಎರಡುವಾರಗಳ ಹಿಂದೆಯೇ ವೈದ್ಯಕೀಯ ಸಚಿವ ಶರಣ ಪ್ರಕಾಶ್ ಪಾಟೀಲ್, ಮಂಕಿಪಾಕ್ಸ್ ಕಾಯಿಲೆಗೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 50 ಬೆಡ್ ಹಾಸಿಗೆ ಮೀಸಲು ಇಡಲಾಗಿದೆ ಎಂದು ತಿಳಿಸಿದ್ದರು. ಅಲ್ಲದೇ ರಾಜ್ಯದ ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕ (ICU) ಬೆಡ್ ಸಿದ್ಧತೆಗೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದರು.

Share.

Related Articles

Leave a Reply

Your email address will not be published. Required fields are marked *

Back to top button