ಪ್ರಮುಖ ಸುದ್ದಿ
ವಿಧಾನ ಪರಿಷತ್ ಚುನಾವಣೆ : ಬಿಜೆಪಿ -3, ಜೆಡಿಎಸ್ -2, ಕಾಂಗ್ರೆಸ್ಸಿಗೆ 1ಸ್ಥಾನದಲ್ಲಿ ಗೆಲುವು!
ಕಲಬುರಗಿ : ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಜಯ ಗಳಿಸಿದ್ದಾರೆ. 321 ಮತಗಳಿಂದ ಚಂದ್ರಶೇಖರ್ ಪಾಟೀಲ್ ಜಯ ಸಾಧಿಸಿದ್ದಾರೆ. ಇನ್ನು ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 3.864 ಮತಗಳಿಂದ ಬಿಜೆಪಿ ಅಬ್ಯರ್ಥಿ ಅ. ದೇವೇಗೌಡ ಗೆಲುವು ದಾಖಲಿಸಿದ್ದಾರೆ.
ಒಟ್ಟು ಆರು ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಯಲ್ಲಿ 2 ಸ್ಥಾನ ಜೆಡಿಎಸ್ ಗೆದ್ದಿದ್ದರೆ, ಬಿಜೆಪಿ 3 ಸ್ಥಾನ ಗೆದ್ದಿದೆ. ಕಾಂಗ್ರೆಸ್ ಪಕ್ಷ 1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ನ ಮರಿತಿಬ್ಬೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ನ ಎಸ್.ಎಲ್. ಭೋಜೇಗೌಡ, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್ ಗೆಲುವು ಸಾಧಿಸಿದ್ದಾರೆ.