ರಾಷ್ಟ್ರಪತಿಗೆ ಸಂಸದ ಪ್ರತಾಪ ಸಿಂಹ ಕೇಳಿದ ಪ್ರಶ್ನೆ ಏನು ಗೊತ್ತಾ?
ರಾಷ್ಟ್ರಪತಿಗೆ ಟ್ಯಾಗ್ ಮಾಡಿ ಟಾಂಗ್ ನೀಡಿದ ಪ್ರತಾಪ ಸಿಂಹ?
ವಿಧಾನಸೌಧ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗವಹಿಸಿದ್ದರು. ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವ ವೇಳೆ ಟಿಪ್ಪು ಸುಲ್ತಾನ್ ಗುಣಗಾನ ಮಾಡಿದ್ದರು. ಟಿಪ್ಪು ಮೈಸೂರು ಕ್ಷಿಪಣಿ ಜನಕ ಎಂದು ಕೊಂಡಾಡಿದ್ದರು. ರಾಜ್ಯದಲ್ಲಿ ಟಿಪ್ಪು ಸುಲ್ತಾನ ಜಯಂತಿ ಆಚರಣೆ ವಿವಾದ ಭುಗಿಲೆದ್ದಿದೆ. ಬಿಜೆಪಿ ಟಿಪ್ಪು ಸುಲ್ತಾನ್ ಜಯಂತಿ ವಿರೋಧಿಸಿ ತೀವ್ರ ಹೋರಾಟ ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರಪತಿಗಳು ರಾಜ್ಯಕ್ಕೆ ಬಂದು ಟಿಪ್ಪು ಬಗ್ಗೆ ಹೊಗಳಿಕೆಯ ಮಾತನಾಡಿದ್ದು ಬಿಜೆಪಿ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿದೆ. ಮಾಜಿ ಸಿಎಂ, ಬಿಜೆಪಿ ರಾಜ್ಯದ್ಯಕ್ಷ ಬಿಎಸ್.ಯಡಿಯೂರಪ್ಪ ಅವರು ರಾಷ್ಟ್ರಪತಿಗಳ ಹೇಳಿಕೆ ಬಗ್ಗೆ ಟೀಕೆ ಮಾಡುವುದಿಲ್ಲ. ನೋ ಕಾಮೆಂಟ್ಸ್ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಮೈಸೂರು ಸಂಸದ, ಬಿಜೆಪಿ ಯುವ ಮೋರ್ಚಾ ಅದ್ಯಕ್ಷ ಪ್ರತಾಪ ಸಿಂಹ ಮಾತ್ರ ನೇರವಾಗಿ ರಾಷ್ಟ್ರಪತಿಗಳಿಗೆ ಪ್ರಶ್ನೆ ಹಾಕಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳೇ ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಪ್ರರ್ವತಕರಾಗಿದ್ದರೆ. 3 ಮತ್ತು 4 ನೆ ಆಂಗ್ಲೋಇಂಡಿಯನ್ ಯುದ್ದ ಏಕೆ ಸೋತರು?ಕ್ಷಿಪಣಿಗಳನ್ನೇಕೆ ಆ ಸಮಯದಲ್ಲಿ ಬಳಸಲಿಲ್ಲ? ಎಂದು ಟ್ವೀಟ್ ಮಾಡಿ ರಾಷ್ಟ್ರಪತಿ ಭವನ ಟ್ವೀಟರ್ ಖಾತೆಗೆ ಟ್ಯಾಗ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಆಯ್ಕೆ ಮೂಲಕ ರಾಷ್ಟ್ರಪತಿ ಆಗಿರುವ ರಾಮನಾಥ್ ಕೋವಿಂದ್ ಅವರನ್ನೇ ಪ್ರಶ್ನೆ ಮಾಡುವ ಮೂಲಕ ಸಂಸದ ಪ್ರತಾಪ ಸಿಂಹ ಎಲ್ಲರ ಗಮನ ಸೆಳೆದಿದ್ದಾರೆ. ಆದರೆ, ಬಿಜೆಪಿ ಪ್ರತಾಪ ಸಿಂಹ ಅವರ ಈ ನಡೆಯನ್ನು ಹೇಗೆ ಸ್ವೀಕರಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.