ಪ್ರಮುಖ ಸುದ್ದಿ
ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ- ರೇಣುಕಾಚಾರ್ಯ
ಡಿಸಿಎಂ ಸ್ಥಾನ ಸೃಷ್ಟಿ ಯ ಅಗತ್ಯವಿಲ್ಲ- ಎಂ.ಪಿ.ರೇಣುಕಾಚಾರ್ಯ
ದಾವಣಗೆರೆಃ ಡಿಸಿಎಂ ಸ್ಥಾನ ನೀಡುವ ಅಗತ್ಯವಿಲ್ಲ. ಸಿಎಂ ಅವರ ಒಬ್ಬರೇ ಸಾಕು. ಯಾವ ಜಿಲ್ಲೆಗೆ ಸಚಿವ ಸ್ಥಾನ ನೀಡಿಲ್ಲ ಆಯಾ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ.ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗೆ ಸಚಿವ ಸ್ಥಾನ ನೀಡಿಲ್ಲ. ಈ ಹಿನ್ನೆಲೆ ಜಿಲ್ಲೆಗೊಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿರುವೆ ಎಂದರು.