ಪ್ರಮುಖ ಸುದ್ದಿ
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆ : ಆರೋಪಿ ಬಂಧನ
ಬೆಳಗಾವಿ: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವತಿಯನ್ನು ಹತ್ಯೆ ಮಾಡಿದ ಆರೋಪಿ ಯೊಗೇಶ ಚೌಗಲೆನನ್ನು ಸದಲಗಾ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಇದೇ ಜುಲೈ 28 ರಂದು ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮ ಸಮೀಪದ ಕಬ್ಬಿನ ಗದ್ದೆಯಲ್ಲಿ ಮಹಾರಾಷ್ಟ್ರ ಮೂಲದ ಅಮೃತಾ ಕುಂಬಾರ ಎಂಬ ಯುವತಿಗೆ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಬೆನ್ನು ಬಿದ್ದ ಸದಲಗಾ ಠಾಣೆಯ ಪೊಲೀಸರು ಪ್ರಕರಣವನ್ನು ಬೇಧಿಸಿ ಆರೋಪಿ ಯೊಗೇಶ ಚೌಗಲೆ ಬಂಧಿಸಿ ಜೈಲಿಗಟ್ಟಿದ್ದಾರೆ.