ಪ್ರಮುಖ ಸುದ್ದಿ
ಕೌಟುಂಬಿಕ ಕಲಹ : ಪತ್ನಿ ಹತ್ಯೆ ಮಾಡಿದ ಪತಿ ಬಂಧನ!
ಯಾದಗಿರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿದ ಘಟನೆ ಶಹಾಪುರ ತಾಲೂಕಿನ ಹತ್ತಿಗುಡೂರು ಗ್ರಾಮದಲ್ಲಿ ನಡೆದಿದೆ. ರೇಣುಕಾ(30)ರನ್ನು ಕೊಲೆ ಮಾಡಿದ ಆರೋಪಿ ಯಲ್ಲಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ತನಿಖೆಯಿಂದಷ್ಟೇ ಹತ್ಯೆಗೆ ನಿಖರವಾದ ಕಾರಣ ಏನೆಂಬುದು ಬಯಲಾಗಬೇಕಿದೆ.