ಪ್ರಮುಖ ಸುದ್ದಿ
ಸಂಶೋಧಕ ಎಂ.ಎಂ.ಕಲಬುರಗಿ ಹತ್ಯೆ ಕೇಸ್ : ಆರೋಪಿಗಳ ಜಾಮೀನು ಅರ್ಜಿ ವಜಾ
ಧಾರವಾಡ : ಸಂಶೋಧಕ ಎಮ್.ಎಮ್ ಕಲಬುರ್ಗಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಧಾರವಾಡ ಹೈಕೋರ್ಟ್ ಪೀಠ ಆದೇಶಿಸಿದೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗಣೇಶ ಮಿಸ್ಕಿನ್ ಮತ್ತು ಅಮಿತ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜುಲೈ 4ರಂದು ವಿಚಾರಣೆ ಮುಗಿಸಿದ ಕೋರ್ಟ್, ಆದೇಶವನ್ನು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಬಿ.ಎ ಪಾಟೀಲ್ ಅವರ ಏಕಸದಸ್ಯ ಪೀಠ ಇಂದು ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದೆ.