ಪ್ರಮುಖ ಸುದ್ದಿ
ಯಾದಗಿರಿಃ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯೋರ್ವನ ಕೊಲೆ
ಕೊಡಲಿಯಿಂದ ಕೊಚ್ಚಿ ವ್ಯಕ್ತಿಯೋರ್ವನ ಕೊಲೆ
ಯಾದಗಿರಿಃ ತಾಲೂಕಿನ ಕ್ಯಾಸಪನಹಳ್ಳಿ ಸಮೀಪ ಜಮೀನೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಯೋರ್ವನನ್ನು ದುಷ್ಕರ್ಮಿಯೊಬ್ಬ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿ ಅಲಿಪುರ ಗ್ರಾಮದ ಮಲ್ಲಪ್ಪ ಎಂದು ಗುರುತಿಸಲಾಗಿದೆ.
ಕೊಲೆಗೈದ ಆರೋಪಿ ಕ್ಯಾಸಪನಹಳ್ಳಿ ಗ್ರಾಮದವನ್ನೆಂದು ಗುರುತಿಸಲಾಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ