ಲೈಂಗಿಕ ಪ್ರಕರಣಃ ಶಿವಮೂರ್ತಿ ಮುರುಘಾ ಶರಣರ ಬಂಧನ, ರಹಸ್ಯ ಸ್ಥಳದಲ್ಲಿ ವಿಚಾರಣೆ
ಲೈಂಗಿಕ ಪ್ರಕರಣ ಹೈಡ್ರಾಮಕ್ಕೆ ಅಂತ್ಯವಾಡಿದ ಪೊಲೀಸರು
ಲೈಂಗಿಕ ಪ್ರಕರಣಃ ಶಿವಮೂರ್ತಿ ಮುರುಘಾ ಶರಣರ ಬಂಧನ, ರಹಸ್ಯ ಸ್ಥಳದಲ್ಲಿ ವಿಚಾರಣೆ
ಮುರುಘಾ ಶರಣರ ಬಂಧನ ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ
ಚಿತ್ರದುರ್ಗಃ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹಿನ್ನೆಲೆ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಗುರುವಾರ ರಾತ್ರಿ 10 ಗಂಟೆ ನಂತರ ಪೊಲೀಸರು ಬಂಧಿಸಿದ್ದಾರೆ.
ಮುರುಘಾ ಶರಣರನ್ನು ಬಂಧಿಸಿದ ಪೊಲೀಸರು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದ್ದು, ಅವರನ್ನು ವೈದ್ಯಕೀಯ ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಕರೆದೊಯ್ಯವ ಸಾಧ್ಯತೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಭಾರಿ ಸಂಖ್ಯೆಯಲ್ಲಿ ಮುರುಘಾ ಮಠಕ್ಕೆ ಆಗಮಿಸಿದ್ದ ಜನರ ಮಧ್ಯ ಪೊಲೀಸರ ತನಿಖಾ ತಂಡ ಬಿಗಿ ಭದ್ರತೆಯೊಂದಿಗೆ ಶರಣರನ್ನು ತಮ್ಮೊಂದಿಗೆ ಕರೆದುಕೊಂಡು ಹೋದರು ಎನ್ನಲಾಗಿದೆ.
ಮುರುಘಾ ಶರಣರ ಬಂಧನಕ್ಕಾಗಿ ಆಗ್ರಹಿಸಿ ಹಲವಡೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ನಡೆದಿದ್ದವು. ಗುರುವಾರ ರಾತ್ರಿ ತನಿಖಾ ಪೊಲೀಸ್ ತಂಡ ಮುರುಘಾ ಶರಣರನ್ನು ಬಂಧಿಸಿ ತಮ್ಮ ತನಿಖಾ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.