ಯಾದಗಿರಿಃ ಮೈಲಾಪುರ ಜಾತ್ರೆ ರದ್ದು
ಯಾದಗಿರಿಃ ಮೈಲಾಪುರ ಜಾತ್ರೆ ರದ್ದು
ಯಾದಗಿರಿಃ ಕೋವಿಡ್-19 ಮಹಾಮಾರಿ ತಡೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಿರುವ ಹಿನ್ನೆಲೆ ಕೋವಿಡ್-19 ನಿಯಮಾವಳಿಯಂತೆ 2021 ನೇ ಸಾಲಿನ ಜನೇವರಿಯಲ್ಲಿ ನಡೆಯಬೇಕಿದ್ದ ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರೆಯನ್ನು ರದ್ದುಪಡಿಸಲಾಗಿದ್ದು, ಭಕ್ತಾಧಿಗಳು ಸಹಕರಿಸಬೇಕೆಂದು ಜಿಲ್ಲಾಡಳಿತ ಪ್ರಕಟಣೆ ಮೂಲಕ ಕೋರಿದೆ.
ಈ ಕುರಿತು ಇದೇ ಡಿ.29ರಂದು ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಕೂಲಂಕುಷವಾಗಿ ಚರ್ಚೆ ನಡೆಸಲಾಗಿದ್ದು, ಅದರಂತೆ ಜಾತ್ರಾ ಮಹೋತ್ಸವದಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳು ಹಾಗೂ ಅಂತರಾಜ್ಯಗಳಿಂದಲ್ಲೂ ಭಕ್ತಾಧಿಗಳು ಆಗಮಿಸುವರು, ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಕೋವಿಡ್-19 ಸೋಂಕು ಹರಡದಂತೆ ತಡೆಗಟ್ಟಲು 2021ರ ಜನವರಿ 13 ರಿಂದ 18ರ ವರೆಗೆ ನಡೆಯಬೇಕಿದ್ದ ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರಾ ಉತ್ಸವವನ್ನು ರದ್ದುಪಡಿಸಲಾಗಿದೆ. ಕಾರಣ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಕೋವಿಡ್ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಡಳಿತ ತಿಳಿಸಿದೆ.