ಪ್ರಮುಖ ಸುದ್ದಿ
ಮೈಸೂರಿನಲ್ಲಿ ಭಾರಿ ಮಳೆಃ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ
ಮೈಸೂರಿನಲ್ಲಿ ಭಾರಿ ಮಳೆಃ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ
ಮೈಸೂರಃ ಬುಧವಾರ ರಾತ್ರಿಯಿಂದ ಗುರುವಾರ ಬೆಳಗಿನ ಜಾವದವರೆಗೂ ಮಳೆ ಸುರಿದಿದ್ದು, ಅಂದಾಜು 10 ಸೆಂ.ಮೀನಷ್ಟು ಮಳೆಯಾಗಿದೆ ಎನ್ನಲಾಗಿದೆ.
ಭಾರಿ ಪ್ರಮಾಣದಲ್ಲಿ ಮಳೆಯಾದ್ದರಿಂದ ಚಾಮುಂಡಿ ಬೆಟ್ಟಕ್ಕೆ ತೆರಳುವ ರಸ್ತೆ ಕುಸಿದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಈ ಕುರಿತು ಮಾಹಿತಿ ಪಡೆದ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ ಜಿಲ್ಲಾಧಿಕಾರಿಯವರಿಗೆ ಮಾತಾಡಿ ಕೂಡಲೇ ಕುಸಿದ ರಸ್ತೆ ದುರಸ್ತಿ ಕಾರ್ಯ ಮಾಡುವಂತೆ ಸೂಚಿಸಿದ್ದಾರೆ.
ರಸ್ತೆ ಕುಸಿತದಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ದುರಸ್ತಿ ಕಾರ್ಯ ನಂತರವೇ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದು, ರಸ್ತೆ ದುರಸ್ತಿ ಕಾರ್ಯಗೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.