ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶಗೌಡ ಚಾಲನೆ
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶಗೌಡ ಚಾಲನೆ
ಮಂಡ್ಯ, ನಾಗಮಂಗಲ: ತಾಲೂಕಿನ ವಿವಿಧ ಗ್ರಾಮಗಳಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.
ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದ ಉಮರ್ ನಗರದಲ್ಲಿ 75 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ನಿರ್ಮಾಣ ಕಾಮಗಾರಿ ಹಾಗೂ ನಾಗಮಂಗಲ ಪುರಸಭೆ ವ್ಯಾಪ್ತಿಯ ಮಾಯಣ್ಣ ಗೌಡನ ಕೊಪ್ಪಲು 25 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಗುಣಮಟ್ಟದ ಬಗ್ಗೆ ಯಾವುದೇ ರಾಜಿ ಇಲ್ಲ. ಅತ್ಯುತ್ತಮವಾದ ರಸ್ತೆ ಮತ್ತು ರಸ್ತೆ ಎರಡು ಬದಿಯ ಚರಂಡಿ ವ್ಯವಸ್ಥೆ ನಿರ್ಮಿಸಲಾಗುತ್ತಿದೆ. ಗ್ರಾಮಗಳ ಸ್ವಚ್ಛತೆಯ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಹಂತಹಂತವಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಚನ್ನಪ್ಪ, ಪುರಸಭಾ ಸದಸ್ಯ ಜಾಫರ್, ಮುಖಂಡರಾದ ರಘು, ಸತೀಶ್, ಹಾಗೂ ಗೌರೀಶ್, ಹಾಜರಿದ್ದರು.
-ವರದಿ: ದೇ.ರಾ .ಜಗದೀಶ ನಾಗಮಂಗಲ.