ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿಗೆ ಕೆಂಚಪ್ಪ ನಗನೂರ ಭಾಜನ
ಕೆಂಚಪ್ಪ ನಗನೂರ ಅವರಿಗೆ ಸಹಕಾರಿ ರತ್ನ ಪ್ರಶಸ್ತಿ
ಕೆಂಚಪ್ಪ ನಗನೂರ ಅವರಿಗೆ ಸಹಕಾರಿ ರತ್ನ ಪ್ರಶಸ್ತಿ
yadgiri, ಶಹಾಪುರಃ ಸಗರನಾಡು ಭಾಗದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಯಾದಗಿರಿ ಸಹಕಾರಿ ಸಂಘಗಳ ನಿವೃತ್ತ ಉಪ ನಿಬಂಧಕರಾದ ಕೆಂಚಪ್ಪ ನಗನೂರ ಅವರು ಪ್ರಸ್ತುತ 2023-24 ನೇ ಸಾಲಿನ ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ.ಬೆಂಗಳೂರ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿಗೆ ಈ ಬಾರಿ ನಿವೃತ್ತ ಉಪ ನಿಬಂಧಕರಾದ ಕೆಂಚಪ್ಪ ನಗನೂರ ಅವರನ್ನು ಆಯ್ಕೆ ಮಾಡಿದೆ.
ಇದೇ ನ.17 ರಂದು ಹುಬ್ಬಳ್ಳಿ ಬೈಪಾಸ್ ರಸ್ತೆ, ತೋಟಗಾರಿಕಾ ವಿಶ್ವವಿದ್ಯಾಲಯ ಪಕ್ಕದ ಮೈದಾನ ಬಾಗಲಕೋಟ್ ನಲ್ಲಿ ನಡೆಯುವ 71 ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರು, ಸಹಕಾರ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಸಹಕಾರಿ ಕ್ಷೇತ್ರದಲ್ಲಿ ನಗನೂರ ಅವರ ಅನುಪಮ ಸೇವೆ ಗುರುತಿಸಿ ಮಹಾ ಮಂಡಳಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಹರ್ಷಃ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ಕೆಂಚಪ್ಪ ನಗನೂರ ಅವರಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಜಿಲ್ಲ ಯೂನಿಯನ್ ಅಧ್ಯಕ್ಷ ವಿಶ್ವನಾಥರಡ್ಡಿ ದರ್ಶನಾಪುರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಗುರುನಾಥರಡ್ಡಿ ಪಾಟೀಲ್, ಎಂ. ನಾರಾಯಣ, ಬಸವರಾಜ ಹಿರೇಮಠ, ಸೇರಿದಂತೆ ಹಲವಾರು ಗಣ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಯೋಗ್ಯ ವ್ಯಕ್ತಿಗೆ ಪ್ರಶಸ್ತಿ ದೊರಕಿದೆ ಎಂದು ಅಭಿನಂದನೆಗಳು ಸಲ್ಲಿಸಿದ್ದಾರೆ.