ದೋರನಹಳ್ಳಿ ದುರಂತಃ ಆಸ್ಪತ್ರೆಗೆ ಭೇಟಿ ನೀಡಿದ ನಮೋಶಿ, ಗುರು ಕಾಮಾ
ಬಸವೇಶ್ವರ ಆಸ್ಪತ್ರೆಗೆ ಭೇಟಿ ನೀಡಿದ ನಮೋಶಿ, ಗುರು ಕಾಮಾ
kalburgi, yadgiri, ಶಹಾಪುರಃ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮ ವ್ಯಾಪ್ತಿ ಸಿಲೆಂಡರ್ ಸ್ಪೋಟ ದುರಂತದಲ್ಲಿ ತೀವ್ರ ಗಾಯಗೊಂಡು ಸುಮಾರು 25 ಜನರು ಕಲ್ಬುರ್ಗಿಯ ಬಸವೇಶ್ವರ, ಚಿರಾಯು ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಯಾದಗಿರಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗುರು ಕಾಮಾ ಗಾಯಾಳುಗಳಿಗೆ ಧೈರ್ಯ ತುಂಬಿದರು.
ಇದೇ ದುರಂತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಕ್ಕಳು ಮತ್ತು ಓರ್ವ ಅಜ್ಜಿ ಸಾವನ್ನಪ್ಪಿದ್ದು, ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ ಅವರು, ತೀವ್ರ ನರಳುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಚಿಕಿತ್ಸೆಗಾಗಿ ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಲಾಗಿದೆ. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಆರೋಗ್ಯ ಅಧಿಕಾರಿಗಳಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಲು ಸೂಚನೆ ನೀಡಿದ್ದಾರೆ. ಆರಾಮವಾಗಿರಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.
ಇದೊಂದು ದುರಂತ. ಘಟನೆಯಲ್ಲಿ ಮೃತಪಟ್ಟವರಿಗೆ ಸೂಕ್ತ ಪರಿಹಾರ ಕಲ್ಪಿಸಲು ಆರೋಗ್ಯ ಸಚಿವರ ಗಮನಕ್ಕೆ ತರಲಾಗಿದೆ. ಅಲ್ಲದೆ ಸಿಲೆಂಡರ್ ವಿಮೆ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದೇನೆ. ಗಾಯಾಳು ಸೇರಿದಂತೆ ಘಟನೆಯಲ್ಲಿ ಮೃತ ಪಟ್ಟವರಿಗೆ ಸಿಲೆಂಡರ್ ವಿಮೆ ಪರಿಹಾರ ಒದಗಿಸುವತ್ತ ಗಮನಹರಿಸಲು ಕೋರಿದ್ದೇನೆ. ಸರ್ಕಾರದಿಂದಲೂ ಪರಿಹಾರ ಕಲ್ಪಿಸಲು ಮನವಿ ಮಾಡಿದ್ದೇನೆ.
-ಗುರು ಕಾಮಾ. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ. ಯಾದಗಿರಿ.