ಪ್ರಮುಖ ಸುದ್ದಿ
ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ -ಸಿಎಂ ಯಡಿಯೂರಪ್ಪ
ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ನೀಡಲು ಆದೇಶಿಸಿದ್ದೇನೆ. ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಅನೇಕರು ತನಿಖೆ ನಡೆಸಬೇಕೆಂದು ಹೇಳಿದ್ದರು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಫೋನ್ ಕದ್ದಾಲಿಕೆ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಸಿಎಲ್ ಪಿ ನಾಯಕ ಸಿದ್ಧರಾಮಯ್ಯ ಸೇರಿದಂತೆ ಅನೇಕ ಶಾಸಕರು, ಸಚಿವರ ಫೋನ್ ಕದ್ದಾಲಿಕೆ ಆಗಿದ್ದು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯ ಕೇಳಿಬಂದಿತ್ತು. ದೆಹಲಿಗೆ ತೆರಳಿದ್ದ ಸಿಎಂ ಹೈಕಮಾಂಡ್ ಭೇಟಿ ಮಾಡಿ ಬಂದ ಬಳಿಕ ಫೋನ್ ಕದ್ದಾಲಿಕೆ ಪ್ರಕರಣ ಸಿಬಿಗೆ ವಹಿಸುವ ನಿರ್ಧಾರ ಪ್ರಕಟಿಸಿದ್ದು ತೀವ್ರ ಕುತೂಹಲ ಕೆರಳಿಸಿದೆ.