Homeಜನಮನಪ್ರಮುಖ ಸುದ್ದಿ
ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ 2024ರ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ ಕಾಲಭೈರವನ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 2014 ಮತ್ತು 2019ರಲ್ಲಿ ಪ್ರಧಾನಿ ಮೋದಿ ಇಲ್ಲಿಂದ ಗೆದ್ದಿದ್ದಾರೆ.
ಇದಕ್ಕೂ ಮುನ್ನ ಮೇ 13ರಂದು ಆ ಪ್ರದೇಶದಲ್ಲಿ ರೋಡ್ ಶೋ ನಡೆಸಿದ್ದರು. ರಾಜನಾಥ್ ಸಿಂಗ್, ಅಮಿತ್ ಶಾ, ಜಿಪಿ ನಡ್ಡಾ, ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ನಿತೀಶ್ ಕುಮಾರ್ ಪ್ರಧಾನಿ ಮೋದಿಯವರ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.