Homeಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

ಮೋದಿ 3.0 ಸರ್ಕಾರದ ಮೊದಲ ಬಜೆಟ್ ಜುಲೈ 24ಕ್ಕೆ ಮಂಡನೆ ಸಾಧ್ಯತೆ

ನವದೆಹಲಿ: ಮೋದಿ 3.0 ಸರ್ಕಾರದ ಮೊದಲ ಬಜೆಟ್ ಜುಲೈ 24ಕ್ಕೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಜುಲೈ 22ಕ್ಕೆ ಮುಂಗಾರು ಅಧಿವೇಶನ ಶುರುವಾಗಲಿದ್ದು, ಜುಲೈ 23ಕ್ಕೆ ಆರ್ಥಿಕ ಸಮೀಕ್ಷಾ ವರದಿ ಪ್ರಸ್ತುತಪಡಿಸಲಾಗುತ್ತದೆ. ಜುಲೈ 24ಕ್ಕೆ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಬಜೆಟ್ ತಯಾರಿಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ ಎನ್ನಲಾಗಿದೆ.

18ನೇ ಲೋಕಸಭೆಯ ಮೊದಲ ಅಧಿವೇಶನ ಜುಲೈ 2ರಂದು ಮುಕ್ತಾಯಗೊಂಡಿದೆ. ಜುಲೈ 22ಕ್ಕೆ ಎರಡನೇ ಅಧಿವೇಶನ ಆರಂಭವಾಗಿ ಜುಲೈ 24ಕ್ಕೆ ಬಜೆಟ್ ಮಂಡನೆ ಆಗಬಹುದು ಎನ್ನಲಾಗುತ್ತಿದೆ.

ಸಂಸತ್ತಿನಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಬಾರಿಯ ಬಜೆಟ್ನಲ್ಲಿ ಬಡವರು, ಯುವಜನರು, ಮಹಿಳೆಯರು, ರೈತರಿಗೆ ಆದ್ಯತೆ ಸಿಗಲಿದೆ. ಹಾಗೆಯೇ, ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ನಿಟ್ಟಿನಲ್ಲಿ ಹಲವು ಐತಿಹಾಸಿಕ ಹೆಜ್ಜೆಗಳನ್ನು ಬಜೆಟ್ ನಲ್ಲಿ ಕೈಗೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button